ಕಾಂಗ್ರೆಸನವರಿಗೆ ಸೋಲಿನ ಭಯ ಕಾಡುತ್ತಿದೆ : ನಳಿನ ಕುಮಾರ ಕಟೀಲ

ಸಮಗ್ರ ಪ್ರಭ ಸುದ್ದಿ
1 Min Read

ಗದಗ:224 ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಈ ಬಾರಿ ಸ್ಪಷ್ಟ ಬಹುಮತದಿಂದ ಮತ್ತೆ ನಮ್ಮ ಸರ್ಕಾರ ಜಯಭೇರಿ ಬಾರಿಸಲಿದೆ ಜೊತೆಗೆ ಗದಗ ಜಿಲ್ಲೆಯ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತವೆ‌‌ ಎಂದು ಬಿಜೆಪಿ ರಾಜ್ಯಧ್ಯಕ್ಷರಾದ ನಳಿನಕುಮಾರ ಕಟೀಲ ಹೇಳಿದರು.

ಗದಗ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಗರಿಬೇ ಹಠಾವೇ ಯೋಜನೆಗಳನ್ನು ಕಾಂಗ್ರೆಸ ಜಾರಿಗೆ ತರಲ್ಲಿಲ್ಲ ಅನೇಕ ಯೋಜನೆಗಳನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ
ಬಿಜೆಪಿ ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಿಸಿದೆ.

 

ಭಯೋತ್ಪಾದನೆ ಚಟುವಟಿಕೆಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ಇದೆ.ವೀರಶೈವ ಲಿಂಗಾಯತ ಸಮುದಾಯವನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್ ಪಕ್ಷದವರು ಮಾಡಿದ್ದಾರೆ ಕಾಂಗ್ರೆಸ್ ನವರಿಗೆ ಸೋಲಿನ ಭಯ ಕಾಡುತ್ತಿದೆ ಜೊತೆಗೆ ಗುಂಡಾಗಿರಿಯಿಂದ ಗದಗ ಕ್ಷೇತ್ರಗಳನ್ನು ಗೆಲ್ಲಬಹುದು ಎಂದು ತಿಳಿದಿದ್ದಾರೆ. ಅದು ಎಂದು ಸಾಧ್ಯ ಇಲ್ಲ ಜನರು ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ

ಬಿಜೆಪಿ ಸರ್ಕಾರವೇ ಲಿಂಗಾಯತರನ್ನ ಸಿ ಎಂ ಮಾಡೋದು
ಕಾಂಗ್ರೆಸ್ ನವರು ಲಿಂಗಾಯತರನ್ನ ಸಿ ಎಂ ಮಾಡಿಲಿ ಎಂದು ಸವಾಲು ಹಾಕಿದರು.

ಸುದ್ದಿಗೊಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ್,ಗದಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ, ಲಿಂಗರಾಜ್ ಪಾಟೀಲ್, ರಾಜು ಕುರಡಗಿ, ಶ್ರೀಕಾಂತ್ ಕಟವಟಿ, ಗದಗ ಜಿಲ್ಲಾಧ್ಯಕ್ಷ ಮುತ್ತಣ್ಣ ಲಿಂಗನಗೌಡ ಸೇರಿದಂತೆ ಅನೇಕ ಮುಖಂಡರು ಕಾರ್ಯಕರ್ತರು ಹಾಜರಿದ್ದರು.

Share this Article