ಗದಗ: ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಅವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಸಿಗದಿದ್ದಕ್ಕೆ ಭಂಡಾಯ ಅಭ್ಯರ್ಥಿಯಾಗಿ ಕಾಂಗ್ರೆಸ್ ಹೈಕಮಾಂಡಗೆ ಸೆಡ್ಡು ಹೊಡೆದು ಶಿರಹಟ್ಟಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ ಕಾಂಗ್ರೆಸ್ ಪಕ್ಷದಿಂದ ಸಾಮಾಜಿಕ ನ್ಯಾಯದಡಿಯಲ್ಲಿ ಸುಜಾತಾ ದೊಡ್ಡಮನಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ ಭಂಡಾಯ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ ಸೇರಿದಂತೆ ರಾಜ್ಯಾದ್ಯಂತ ಒಟ್ಟು 24 ಸದಸ್ಯರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಯ ಕೆ,ರೆಹಮಾನ್ ಖಾನ್ ಅವರು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ.