ನವದೆಹಲಿ : ದೇಶಾದ್ಯಂತ 2,000 ರೂ. ಮುಖಬೆಲೆಯನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಎಲ್ಲರಿಗೂ ತಿಳಿಸಿದೆ.
ಶುಕ್ರವಾರ ಪ್ರಕಟಣೆ ನೀಡಿದ ಭಾರತೀಯ ರಿಸರ್ವರ್ ಬ್ಯಾಂಕ್ ಮಾಹಿತಿ ನೀಡಿದ್ದು,” 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಲಾಗಿದೆ. ಅಕ್ಟೋಬರ್ 1 ರಿಂದ ಈ ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ. ಹೀಗಾಗಿ, ಸೆ.30ರ ಒಳಗೆ ಸಾರ್ವಜನಿಕರು ಬ್ಯಾಂಕ್‌ಗಳಿಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬೇಕು ” ಎಂದು ಸೂಚನೆ ನೀಡಿದೆ.
ಮೇ 23 ರಿಂದ ಬದಲಾವಣೆಗೆ ಅವಕಾಶ:
ಸದ್ಯ 2,000 ರೂಪಾಯಿ ನೋಟು ಹೊಂದಿದ್ದರೆ ಮೇ 23ರ ನಂತರ ಸಮೀಪದ ಬ್ಯಾಂಕ್‌ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು. ಆದರೆ, ಒಮ್ಮೆಗೆ 10 ನೋಟುಗಳ ಅಂದರೆ 20 ಸಾವಿರ ರೂಪಾಯಿ ಮಾತ್ರ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.
2016 ರಲ್ಲಿ 500 ಹಾಗೂ 1000 ನೋಟ್ ಬ್ಯಾನ್ ಆಗಿತ್ತು:
2016ರ ನವೆಂಬರ್ 8 ರಂದು 500 ಹಾಗೂ 1000 ಮುಖಬೆಲೆಯ ನೋಟು ಅಮಾನ್ಯೀಕರಣದ ನಂತರ ಹೊಸದಾಗಿ 2000 ರೂ. ನೋಟುಗಳನ್ನು ಪರಿಚಯಿಸಲಾಗಿತ್ತು. ಸದ್ಯ ಆ ನೋಟಿನ ಚಲಾವಣೆ ನಿಲ್ಲಿಸಿ ವಾಪಸ್ ಪಡೆಯುವುದಾಗಿ ಆರ್‌ಬಿಐ ತಿಳಿಸಿದೆ.
ಐದು ವರ್ಷಗಳ ಹಿಂದೆಯೇ ನೋಟು ಮುದ್ರಣ ಸ್ಥಗಿತ:
2018ರಲ್ಲಿಯೇ 2000 ರೂಪಾಯಿ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತಾಗಿ ಸದನಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಲಾಗಿತ್ತು. ಇದೀಗ ಕ್ಲೀನ್ ನೋಟ್ ಅಭಿಯಾನದಡಿ ನೋಟ್‌ಗಳನ್ನು ಹಿಂಪಡೆಯಲು ಆರ್‌ಬಿಐ ಮುಂದಾಗಿದೆ. ಮೇ 23, 2023ರಿಂದ ಯಾವುದೇ ಬ್ಯಾಂಕ್‌ನಲ್ಲಿ 2000 ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಸೂಚಿಸಿದೆ.
ಸೆಪ್ಟೆಂಬರ್ 30 ನಂತರವೂ ಕಾನೂನು ಬದ್ದವಾಗಿರುತ್ತವೆ
ಜನರು ಬ್ಯಾಂಕ್‌ಗಳೊಂದಿಗೆ ನೋಟುಗಳನ್ನು ಬದಲಾಯಿಸಿಕೊಳ್ಳಲು 4 ತಿಂಗಳ ಸಮಯ ಸಾಕು. ಚಲಾವಣೆಯಲ್ಲಿರುವ ಹೆಚ್ಚಿನ ರೂ 2000 ನೋಟುಗಳು ಸೆಪ್ಟೆಂಬರ್ 30 ರ ನಿರ್ದಿಷ್ಟ ಸಮಯದ ಚೌಕಟ್ಟಿನೊಳಗೆ ಬ್ಯಾಂಕ್‌ಗಳಿಗೆ ಹಿಂತಿರುಗುತ್ತವೆ ಎಂದು ಆರ್‌ಬಿಐ ಹೇಳಿದೆ. ಸೆಪ್ಟೆಂಬರ್ 30 ರ ನಂತರವೂ ಕಾನೂನುಬದ್ಧವಾಗಿ ಉಳಿಯುತ್ತದೆ. ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.
ನೋಟು ಬದಲಾವಣೆ ಮಾತ್ರ:
2000 ರೂ. ಮುಖಬೆಲೆಯ ನೋಟುಗಳು ಕಾನೂನುಬದ್ಧವಾಗಿ ಮುಂದುವರಿಯಲಿವೆ. ಸಮಯಕ್ಕೆ ಅನುಗುಣವಾಗಿ ಬದಲಾವಣೆ ಮಾಡಲಾಗುತ್ತಿದೆ. ಸಾರ್ವಜನಿಕ ಸದಸ್ಯರಿಗೆ ಸಾಕಷ್ಟು ಸಮಯವನ್ನು ಒದಗಿಸಲು, ಎಲ್ಲಾ ಬ್ಯಾಂಕ್‌ಗಳು ಸೆಪ್ಟೆಂಬರ್ 30, 2023 ರವರೆಗೆ 2000 ರೂ. ಬ್ಯಾಂಕ್ ನೋಟುಗಳಿಗೆ ಠೇವಣಿ ಮತ್ತು/ಅಥವಾ ವಿನಿಮಯ ಸೌಲಭ್ಯವನ್ನು ಒದಗಿಸುತ್ತವೆ ಎಂದು ತಿಳಿಸಿದೆ.