ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುವ ಶಕ್ತಿ ಯೋಜನೆಗೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಭಾನುವಾರ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಐದು ಗ್ಯಾರಂಟಿಗಳಲ್ಲೊಂದಾದ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ದೂರಿಯಾಗಿ ಚಾಲನೆ ನೀಡದ್ದಾರೆ.
ಈ ಮೂಲಕ ಭಾನುವಾರ ಮಧ್ಯಾಹ್ನದಿಂದ ರಾಜ್ಯದ ಮಹಿಳೆಯರು ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ವಿಧಾನಸೌಧ ಮುಂಭಾಗದ ಗ್ರಾಂಡ್ ಸ್ಟೆಪ್ ಮುಂದೆ ಶಕ್ತಿ ಯೋಜನೆಗೆ ಅದ್ಧೂರಿಯಾಗಿ ಚಾಲನೆ ನೀಡಿದ ಬಳಿಕ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಾದರಿ ಸ್ಮಾರ್ಟ್ ಕಾರ್ಡ್ ಬಿಡುಗಡೆ:
ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಮಾದರಿ ಬಿಡುಗಡೆ ಮತ್ತು ಸಾಂಕೇತಿಕವಾಗಿ ಐದು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಿದರು.
ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಚಾಲನೆ:
ಎಲ್ಲಾ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರುಗಳು ಆಯಾ ಜಿಲ್ಲೆಗಳಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಾಂಕೇತಿಕವಾಗಿ ಟಿಕೆಟ್ ನೀಡಿ ಚಾಲನೆ ನೀಡಲಿದ್ದಾರೆ.