ಗದಗ: ವಿದ್ಯುತ್ ದರ ಏರಿಕೆ ಖಂಡಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಗುರುವಾರ ರಾಜ್ಯ ಬಂದ್‌ಗೆ ಕರೆ ನೀಡಿದ್ದು.
ಈ ಬಂದ್ ಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ನಗರದ ಕೈಗಾರಿಕೆ ಮತ್ತು ವಾಣಿಜ್ಯ ವಹಿವಾಟು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವ ಮೂಲಕ ಬಂದ್ ಗೆ ಬೆಂಬಲ ನೀಡಿದರು ರಾಜ್ಯಾದ್ಯಂತ 25 ವಾಣಿಜ್ಯೋದ್ಯಮ ಸಂಸ್ಥೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಗರದ ಗ್ರೇನ ಮಾರುಕಟ್ಟೆ, ಬಸವೇಶ್ವರ ವೃತ್ತ,ಕೆ ಎಚ್ ಪಾಟೀಲ ವೃತ್ತ ದ ಸುತ್ತಲೂ ವ್ಯಾಪಾರಸ್ಥರು,ಕೈಗಾರಿಕೆಗಳು ಸೇರಿದಂತೆ ಪ್ರಮುಖ ವಾಣಿಜ್ಯ ವಹಿವಾಟು ನಡೆಸುವ ಅಂಗಡಿ ಮುಂಗಟ್ಟುಗಳನ್ನು ಬಂದ ಮಾಡಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಚೇಂಬರ್ ಆಫ್ ಕಾಮರ್ಸ ಕಚೇರಿಯಿಂದ ಆರಂಭವಾದ ಪ್ರತಿಭಟನೆ ನಗರದ ವಿವಿಧ ವೃತ್ತಗಳಿಂದ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವ್ಯಾಪಾರಸ್ಥರು ವ್ಯಾಪಾರಸ್ಥರು ಮಾತನಾಡಿ, ಸರಕಾರ ಹಾಗೂ ಹಾಗೂ ವಿದ್ಯುತ್ ಏರಿಕೆ ಸರಿಯಲ್ಲ. ಈಗಾಗಲೇ ಎಲ್ಲ ವಸ್ತುಗಳ ಬೆಲೆ ಏರಿಕೆಯಿಂದ ವ್ಯಾಪಾರಸ್ಥರು ತೊಂದರೆಯಲ್ಲಿದ್ದು ವ್ಯಾಪಾರ ಸರಿಯಾಗಿ ನಡೆಯುತಿಲ್ಲ. ಆದ್ದರಿಂದ ವಿದ್ಯುತ್ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.

