50 ವರ್ಷಗಳ ನಂತರ ತಿರುಪತಿ ಲಡ್ಡು ನಂದಿನಿ ತುಪ್ಪ ಬಳಕೆ ಸ್ಥಗಿತ

ಸಮಗ್ರ ಪ್ರಭ ಸುದ್ದಿ
1 Min Read

ಬೆಂಗಳೂರು: ಸುಮಾರು 50 ವರ್ಷಗಳ ನಂತರ ತಿರುಪತಿ ತಿರುಮಲ ಟ್ರಸ್ಟ್ (ಟಿಟಿಡಿ) ಲಡ್ಡುಗಳನ್ನು ತಯಾರಿಸಲು ಕರ್ನಾಟಕ ಹಾಲು ಒಕ್ಕೂಟದಿಂದ (ಕೆಎಂಎಫ್) ತುಪ್ಪ ಖರೀದಿಸುವುದನ್ನು ಸ್ಥಗಿತಗೊಳಿಸಿದೆ.ಕೆಎಂಎಫ್ ನೀಡಿರುವ ಬೆಲೆಯನ್ನು ಒಪ್ಪಿಕೊಳ್ಳದ ಟಿಟಿಡಿ ಮತ್ತೊಂದು ಕಂಪನಿಯೊಂದಿಗೆ ತುಪ್ಪ ಖರೀದಿಸಲು ಮುಂದಾಗಿದೆ.

ಆಗಸ್ಟ್ 1 ರಿಂದ ಹಾಲಿನ ಸಂಗ್ರಹಣೆ ಬೆಲೆ ಹೆಚ್ಚಾಗುವುದರಿಂದ ತುಪ್ಪ ಖರೀದಿಸಲು ಹೆಚ್ಚಿನ ಬೆಲೆಯ ಬೇಡಿಕೆ ಇಟ್ಟಿದ್ದೇವೆ. ಆದರೆ ಟಿಟಿಡಿ ಇ-ಪ್ರೊಕ್ಯೂರ್‍ಮೆಂಟ್ ಸೈಟ್ ಮೂಲಕ ಕಡಿಮೆ ಬೆಲೆಯನ್ನು ನಮೂದಿಸಿದ ಕಂಪನಿಯನ್ನು ಆಯ್ಕೆ ಮಾಡಿದೆ.

ಗುಣಮಟ್ಟದಿಂದಾಗಿ ಕೆಎಂಎಫ್ ತುಪ್ಪ ಅಂತಾರಾಷ್ಟ್ರೀಯ ಮಾರುಕಟ್ಟೆ ಹೊಂದಿದೆ. ಕಡಿಮೆ ಬೆಲೆಗೆ ಬಿಡ್ ಮಾಡುವ ಕಂಪನಿಯೊಂದಿಗೆ ಅವರು ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುತ್ತಿದ್ದಾರೆ ಎಂಬುದು ತಿಳಿದಿದೆ. ಕೆಎಂಎಫ್ ತುಪ್ಪದಿಂದ ಲಡ್ಡುಗಳು ರುಚಿಯಾಗಿವೆ ಎಂದು ಟಿಟಿಡಿ ಹಲವು ಬಾರಿ ಹೇಳಿದ್ದರೂ ಈಗ ಒಪ್ಪಂದ ಮುಕ್ತಾಯವಾಗುತ್ತಿದೆ ಎಂದು ಸ್ಪಷ್ಟವಾಗುತ್ತಿದೆ.

Share this Article