ಬೆಂಗಳೂರು : ಪ್ರಸಕ್ತ ಆರ್ಥಿಕ ಸಾಲಿನ ಜುಲೈ ತಿಂಗಳಿನಲ್ಲಿ ರಾಜ್ಯದಲ್ಲಿ 7,426.92 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ವಾಣಿಜ್ಯ ತೆರಿಗೆಗಳ ಇಲಾಖೆಯ ಮಾಹಿತಿ ಪ್ರಕಾರ ಜುಲೈ ತಿಂಗಳಿನಲ್ಲಿ 5,628.92 ಕೋಟಿ ರೂ. ಸರಕು ಸೇವಾ ತೆರಿಗೆ , 1717.43 ರೂ. ಮಾರಾಟ ತೆರಿಗೆ ಹಾಗೂ 80.57 ಕೋಟಿ ರೂ. ಸಂಗ್ರಹವಾಗಿದೆ.
ಕಳೆದ ವರ್ಷ ಜುಲೈನಲ್ಲಿ 6,470.90 ಕೋಟಿ ರೂ. ಒಟ್ಟು ತೆರಿಗೆ ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜುಲೈ ತಿಂಗಳಿನಲ್ಲಿ ಸುಮಾರು 956 ಕೋಟಿಗೂ ಹೆಚ್ಚು ತೆರಿಗೆ ಸಂಗ್ರಹಿಸಲಾಗಿದೆ.
ಪ್ರಸಕ್ತ ಆರ್ಥಿಕ ಸಾಲಿನ ಕಳೆದ 4 ತಿಂಗಳಲ್ಲಿ ರಾಜ್ಯದಲ್ಲಿ ಒಟ್ಟು ತೆರಿಗೆ 30,765.19 ಕೋಟಿ ತೆರಿಗೆ ಸಂಗ್ರಹವಾಗಿದೆ. ಕಳೆದ ನಾಲ್ಕು ತಿಂಗಳ ಅವಯಲ್ಲಿ 23355.09 ಕೋಟಿ ರೂ. ಸರಕು ಸೇವಾ ತೆರಿಗೆ ಸಂಗ್ರಹವಾಗಿದೆ.
6927.97 ಕೋಟಿ ರೂ. ಮಾರಾಟ ತೆರಿಗೆ ಸಂಗ್ರಹಿಸಲಾಗಿದ್ದು, 482 .13 ಕೋಟಿ ರೂ. ವೃತ್ತಿ ತೆರಿಗೆ ಸಂಗ್ರಹ ಮಾಡಲಾಗಿದೆ.

