ಬೆಂಗಳೂರು: ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದೆ. ಚಂದ್ರನ ಅಂಗಳಕ್ಕೆ ಇಳಿಯುವಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿ ಹಿನ್ನೆಲೆ ನಾಡಿದ್ದು (ಆ. 26) ಬೆಂಗಳೂರಿನ ಇಸ್ರೊ ಕೇಂದ್ರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
ಸದ್ಯ ದಕ್ಷಿಣಾ ಆಫ್ರಿಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ನಿರತರಾಗಿದ್ದಾರೆ. ನಿನ್ನೆ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಲ್ಯಾಂಡ್ ಆಗುತ್ತಿದ್ದಂತೆ ಜೊಹಾನ್ಸ್ ಬರ್ಗ್ ನಿಂದ ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಅಲ್ಲದೆ ಅಲ್ಲಿಂದಲೇ ಇಸ್ರೊ ಅಧ್ಯಕ್ಷ ಸೋಮನಾಥ್ ಅವರಿಗೆ ಖುದ್ದು ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಇಸ್ರೊ ಸಂಸ್ಥೆ, ಚಂದ್ರಯಾನ-3 ರೋವರ್ ಭಾರತದಲ್ಲಿಯೇ ತಯಾರಿಸಲ್ಪಟ್ಟಿದ್ದು, ಚಂದ್ರನ ಮೇಲೆ ನಡೆದಾಡಲು ತಯಾರಾಗಿದೆ. ಲ್ಯಾಂಡರ್‍ನಿಂದ ಇಳಿದು ಚಂದ್ರನ ಮೇಲೆ ನಡೆದಾಡುತ್ತಿದೆ ಎಂದು ಟ್ವೀಟ್ ಮಾಡಿದೆ.