ಪ್ರಜ್ವಲ್​ ರೇವಣ್ಣಗೆ ​​​ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ

ಸಮಗ್ರ ಪ್ರಭ ಸುದ್ದಿ
1 Min Read

ಬೆಂಗಳೂರು : ಜೆಡಿಎಸ್​ನ ಪ್ರಜ್ವಲ್ ರೇವಣ್ಣ ಅವರನ್ನು ಹಾಸನ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್​ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇಂದು (ಸೆಪ್ಟೆಂಬರ್ 01) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್​ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ.

2019ರಲ್ಲಿ ನಡೆದ ಲೋಕಸಭಾ ಚುನಾವಣೆ ವೇಳೆ ನಾಮಪತ್ರ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಹೀಗಾಗಿ ಪ್ರಜ್ವಲ್ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಪರಾಜಿತ ಅಭ್ಯರ್ಥಿ ಅರಕಲಗೂಡು ಮಂಜು ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಆ ಅರ್ಜಿ
ಹೈಕೋರ್ಟಿನಲ್ಲಿ ತಿರಸ್ಕೃತಗೊಂಡಿತ್ತು. ಇದೀಗ ವಕೀಲ ದೇವರಾಜೇಗೌಡ ಅಲ್ಲಿಸಿದ್ದ ಅರ್ಜಿ ಆಧಾರದ ಮೇಲೆ ಹೈಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ.

Share this Article