ರಾಜ್ಯದಲ್ಲಿ 2,400 ಪೊಲೀಸ್ ಪೇದೆಗಳ ನೇಮಕ: ಸಿಎಂ ಸಿದ್ದರಾಮಯ್ಯ

ಸಮಗ್ರ ಪ್ರಭ ಸುದ್ದಿ
1 Min Read

ಬೆಂಗಳೂರು: ಐದು ಸಂಚಾರಿ ಮತ್ತು ಆರು ಮಹಿಳಾ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು. 2,400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುವುದು. ಗೃಹ 2025 ಯೋಜನೆ ಅಡಿಯಲ್ಲಿ 2,225 ಪೊಲೀಸ್ ವಸತಿಗಾಗಿ 450 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಅಧಿಕಾರಿ ಕಚೇರಿ, ನಿರ್ವಹಣೆಗೆ ಕೂಡ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಶನಿವಾರ ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ಮಾತನಾಡಿದರು.

ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಕುಟುಂಬಸ್ಥರಿಗಾಗಿ ಆರೋಗ್ಯ ಭಾಗ್ಯ ಯೋಜನೆ ಅಡಿ ನೂರು ಕೋಟಿ ಕೊಡಲಾಗಿದೆ. ನಿವೃತ್ತಿ ಅಧಿಕಾರಿ ಮತ್ತು ಸಿಬ್ಬಂದಿ ಅವರ ಅವಲಂಬಿತ ಪತಿ, ಪತ್ನಿಯರ ಚಿಕಿತ್ಸೆಗಾಗಿ 25 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ರಾಜ್ಯಾದ್ಯಂತ ಪೊಲೀಸ್ ಮಕ್ಕಳ ಶಿಕ್ಷಣಕ್ಕಾಗಿ ರಾಜ್ಯದ ಏಳು ಸ್ಥಳಗಳಲ್ಲಿ ಪೊಲೀಸ್ ಪಬ್ಲಿಕ್ ಸ್ಕೂಲ್ ತೆರೆಯಲಾಗುವುದು. ಪೊಲೀಸ್ ಕ್ಯಾಂಟೀನ್ ಕಲ್ಪಿಸಲಾಗಿದೆ. ವಿಶೇಷ ಗುಂಪು ಯೋಜನೆಯಡಿ 20 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ. ಕರ್ತವ್ಯದಲ್ಲಿ ಇರುವ ವೇಳೆ ಹುತಾತ್ಮರಾದ ಪೊಲೀಸರಿಗೆ 50 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು ಎಂದರು.

Share this Article