ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಉಡುಗೊರೆ: ತುಟಿಭತ್ಯೆ ಶೇ. 3.75 ಹೆಚ್ಚಳ

ಸಮಗ್ರ ಪ್ರಭ ಸುದ್ದಿ
0 Min Read

ಬೆಂಗಳೂರು: ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ ನೀಡಿರುವ ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇಕಡ 38.75ಕ್ಕೆ ಏರಿಕೆಯಾಗಿದೆ.

ಇದೇ ವೇಳೆ ರಾಜ್ಯ ಸರ್ಕಾರ, ಯುಜಿಸಿ, ಎಐಸಿಟಿಇ, ಐಸಿಎಆರ್‌ ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇಕಡ 4ರಷ್ಟು ಹೆಚ್ಚಿಸಿ(ಶೇ 46ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 1,109 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗಲಿದೆ.

Share this Article