ದೇಶದ ಪ್ರಮುಖ ತೈಲ ಸರಬರಾಜು ಕಂಪನಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 1720 ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಟೆಕ್ನಿಷಿಯನ್ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, 21 ರಿಂದ 27 ವರ್ಷ ವಯಸ್ಸಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯ ಮೂಲಕ 1720 ಮಂದಿಗೆ ಉದ್ಯೋಗಾವಕಾಶ ದೊರೆಯಲಿದೆ.
ಐಒಸಿಎಲ್ ನೇಮಕಾತಿಗೆ ಅಕ್ಟೋಬರ್ 21, 2023 ರಂದು ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆನ್‌ಲೈನ್‌ನಲ್ಲಿ ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 20, 2023 ಕೊನೆಯ ದಿನವಾಗಿದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ IOCL ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಬಹುದು.