ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ; ಭೀಕರ ಅಪಘಾತದಲ್ಲಿ 12 ಮಂದಿ ಸಾವು

ಸಮಗ್ರ ಪ್ರಭ ಸುದ್ದಿ
1 Min Read

ಚಿಕ್ಕಬಳ್ಳಾಫುರ: ಚಿಕ್ಕಬಳ್ಳಾಪುರದ ಹೊರವೊಲಯದಲ್ಲಿ ಗುರುವಾರ ಬೆಳಗ್ಗೆ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದಾರೆ.

ಇಂದು ಬೆಳಗಿನ ಜಾವ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯ ಮುಂದೆಯೇ ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಟಾಟಾ ಸುಮೋ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಸುಮೋದಲ್ಲಿ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಟಾಟಾ ಸುಮೋ ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರದ ಕಡೆ ಹೋಗುತ್ತಿತ್ತು. ಆದರೆ ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ. ಇದರಿಂದ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಮಗು, ಮೂವರು ಮಹಿಳೆಯರು ಸೇರಿ 12 ಜನ ಮೃತಪಟ್ಟಿದ್ದಾರೆ. ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಮೃತರು ಆಂಧ್ರದ ಗೊರಂಟ್ಲ ನಿವಾಸಿಗಳು ಎನ್ನುವುದು ಗೊತ್ತಾಗಿದೆ. ಒಬ್ಬೊಬ್ಬರು ಒಂದೊಂದು ಊರಿನವರು ಎಂಬ ಮಾಹಿತಿ ಸಿಕ್ಕಿದೆ ಎಂದು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್​.ನಾಗೇಶ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Share this Article