ಗದಗ: ನಗರದ ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಅವರಿಂದ 68 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಪೊಲೀಸ್, ಅಬಕಾರಿ, ಅಗ್ನಿಶಾಮಕ, ಎನ್ ಸಿ ಸಿ, ಸೇವಾದಳ, ಮಾಜಿ ಸೈನಿಕರು,ವಿವಿಧ ಶಾಲೆ ಮಕ್ಕಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕನ್ನಡದಲ್ಲೇ ಪಥ ಸಂಚಲನ ಕಮಾಂಡ್ ನೀಡಿದ ಪೊಲೀಸ್ ಇಲಾಖೆ.
ಈ ಸಂಧರ್ಭದಲ್ಲಿ ವಿ. ಪ. ಸದಸ್ಯ ಎಸ್ ವಿ ಸಂಕನೂರ, ನಗರಸಭೆ ಅಧ್ಯಕ್ಷೆ ಉಷಾ ದಾಸರ,ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು.

