ರಾಜ್ಯೋತ್ಸವ ಅಂಗವಾಗಿ ಕರವೇ ಯಿಂದ ಸನ್ಮಾನ

ಸಮಗ್ರ ಪ್ರಭ ಸುದ್ದಿ
1 Min Read

ಗದಗ: ನಗರದ ಹುಡ್ಕೋ ಕಾಲೋನಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾ ಘಟಕ ವತಿಯಿಂದ 68ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ 10 ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಜನಪದ ಕಲಾವಿದರಿಗೆ ಕರವೇ ವತಿಯಿಂದ ಸನ್ಮಾನ ಮಾಡಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಕರವೇ ಯುವ ಘಟಕದ ಅಧ್ಯಕ್ಷ ನಿಂಗನಗೌಡ ಮಾಲಿಪಾಟೀಲ, ಗದಗ ಜಿಲ್ಲಾಧ್ಯಕ್ಷ ಶರಣು ಗೋಡಿ, ಸಿದ್ದಲಿಂಗ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಪಾರ್ವತಿ ವಸ್ತ್ರದ, 34ನೇ ವಾರ್ಡಿನ ನಗರಸಭೆ ಮಾಜಿ ಸದಸ್ಯರಾದ ಅನಿಲ್ ಗರಗ ಸೇರಿದಂತೆ ಕರವೇ ಯುವ ಮುಖಂಡರು ಕಾರ್ಯಕರ್ತರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share this Article