ಕೋವಿಡ್ JN.1 ರೂಪಾಂತರ: ಮುಂಜಾಗ್ರತಾ ಕ್ರಮ ಕುರಿತು ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಸಮಗ್ರ ಪ್ರಭ ಸುದ್ದಿ
1 Min Read

ಬೆಂಗಳೂರು: ಕೋವಿಡ್ JN.1 ರೂಪಾಂತರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೂ 34 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಇಂದು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ.

ಲಭ್ಯವಿರುವ ಮಾಹಿತಿ ಪ್ರಕಾರ JN.1 ಸೋಂಕಿನ ಹರಡುವಿಕೆ ಸಾಮರ್ಥ್ಯ ಹೆಚ್ಚಿರುವುದು ಕಂಡುಬಂದಿದ್ದು ಹೊಸವರ್ಷಾಚರಣೆಯ ಸಂದರ್ಭದಲ್ಲಿ ಜನಸಂದಣಿಯಾಗುವ ಹಾಗು ಒಳಾಂಗಣ ಜನಸಂದಣಿ ಪ್ರದೇಶಗಳಲ್ಲಿ ಮುಂಜಾಗ್ರತವಾಗಿ ಸೂಕ್ತ ಕೋವಿಡ್ ಮಾಸ್ಕ್ ಧರಿಸಲು ಕೋರಲಾಗಿದೆ.

ಅಲ್ಲದೇ, 60 ವರ್ಷ ಮೇಲ್ಪಟ್ಟವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಮತ್ತು ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಸಲಹೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Share this Article