ಗಣರಾಜ್ಯೋತ್ಸವ ರಾಜ್ಯ ಪಥ ಸಂಚಲನಕ್ಕೆ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಆಯ್ಕೆ

ಸಮಗ್ರ ಪ್ರಭ ಸುದ್ದಿ
0 Min Read

ಗದಗ : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರೇಮಾ ಜಕ್ಕನಗೌಡರ ರಾಜ್ಯ ಪಥ ಸಂಚಲನಕ್ಕೆ ಆಯ್ಕೆಯಾಗಿದ್ದಾರೆ. ವಿಜಯಪುರ ವಿಭಾಗೀಯ ಅಧಿಕಾರಿ ಎಮ್ ಎಸ್ ಮುಲ್ಲಾ ಹಾಗೂ ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಶ್ರೀನಿವಾಸ ಬಡಿಗೇರ ಇವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ಮಾಣಿಕ್ಷಾ ಮೈದಾನದಲ್ಲಿ ಜನೆವರಿ 26 ರಂದು ನಡೆಯಲಿರುವ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕ ವೃಂದ, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಆಯ್ಕೆಯಾದ ವಿದ್ಯಾರ್ಥಿನಿಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share this Article