ಗದಗ: ಜಾತ್ಯಾತೀತ ಜನತಾ ದಳ (ಜೆಡಿಎಸ್) ರಾಜ್ಯ ವಕ್ತಾರರಾಗಿ ಯಂಗ್ ಇಂಡಿಯಾ ಪರಿವಾರದ ಸಂಸ್ಥಾಪಕ, ಜೆಡಿಎಸ್ ಮುಖಂಡ ವೆಂಕನಗೌಡ ಗೋವಿಂದಗೌಡ್ರ ನೇಮಕವಾಗಿದ್ದಾರೆ.
ಈ ಕುರಿತು ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧಿಕೃತ ಆದೇಶ ಹೊರಡಿಸಿದ್ದು, ರಾಜ್ಯಾದ್ಯಂತ ಪಕ್ಷ ಸಂಘಟನೆ ಹಾಗೂ ಪಕ್ಷದ ವಕ್ತಾರರಾಗಿ ಸೇವೆ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ವೆಂಕನಗೌಡ ಗೋವಿಂದಗೌಡ್ರ 2023ರ ವಿಧಾನಸಭೆ ಚುನಾವಣೆಯಲ್ಲಿ ಗದಗ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೈಗೊಂಡ ಪಕ್ಷ ಸಂಘಟನೆ ಮತ್ತು ಯಂಗ್ ಇಂಡಿಯಾ ಪರಿವಾರದ ಮೂಲಕ ಕೈಗೊಂಡ ಸಾಮಾಜಿಕ ಸೇವೆಯನ್ನು ಪರಿಗಣಿಸಿ ರಾಜ್ಯ ವಕ್ತಾರ ಹುದ್ದೆ ನೀಡಲಾಗಿದೆ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಅಲ್ಕೋಡ ಹನುಮಂತಪ್ಪ ತಿಳಿಸಿದ್ದಾರೆ.