ಗದಗ : ರಾಷ್ಟ್ರೀಯ ಮತದಾರರ ದಿನವನ್ನು ಪ್ರತಿ ವರ್ಷ ಜನೆವರಿ 25 ರಂದು ಆಚರಿಸಲಾಗುತ್ತಿದೆ. ಪ್ರಸಕ್ತ ವರ್ಷ ಮತದಾನಕ್ಕಿಂತ ಇನ್ನೊಂದಿಲ್ಲ. ನಾನೂ ಖಚಿತವಾಗಿ ಮತದಾನ ಮಾಡುವೆ ಎಂಬ ವಿಶೇಷ ಧ್ಯೇಯವಾಕ್ಯದೊಂದಿಗೆ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜನೆವರಿ 25 , 2024 ರಂದು ಆಚರಿಸಲು ಚುನಾವಣಾ ಆಯೋಗವು ನಿರ್ದೇಶಿಸಿದೆ.
ಚುನಾವಣಾ ಸಂಬಂಧಿತ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಗದಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ವೈಶಾಲಿ ಎಂ.ಎಲ್. ಅವರನ್ನು ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಜನೆವರಿ 25 ರಂದು ಜರುಗುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿಯವರ ಕಛೇರಿ ತಿಳಿಸಿದೆ.