ಸುರಪುರ: ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕ, ಕಾಂಗ್ರೆಸ್ ನಾಯಕ ರಾಜಾ ವೆಂಕಟಪ್ಪ ನಾಯಕ ಅವರು ರವಿವಾರ (ಫೆ.25) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 67 ವರ್ಷದ ರಾಜಾ ವೆಂಕಟಪ್ಪ ನಾಯಕ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ರಾಜಾ ವೆಂಕಟಪ್ಪ ನಾಯಕ ಇತ್ತೀಚೆಗಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.