ಬೆಂಗಳೂರು: ಕಲಬುರಗಿ, ಬಾಗಲಕೋಟೆ, ತುಮಕೂರು, ಕೋಲಾರ ಸೇರಿದಂತೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣ ಅಲೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರಿನಲ್ಲಿ 43.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.