ಡಿಕೆಶಿ ಅಲ್ಲ ಆತ ಡಿಕೆ’ಛೀ’ : ಜೆಡಿಎಸ್ ವಾಗ್ದಾಳಿ

ಸಮಗ್ರ ಪ್ರಭ ಸುದ್ದಿ
1 Min Read

ಗದಗ: ರಾಜ್ಯದಲ್ಲಿ ತೀವ್ರ ಕೋಲಾಹಲ ಎಬ್ಬಿಸಿದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ ಡಿಕೆಶಿ ಕೈವಾಡವಿದೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದರು ನಗರದ ಗಾಂಧಿ ವೃತ್ತದಲ್ಲಿ ಡಿಸಿಎಂ ಡಿ ಕೆ ಶಿವುಕುಮಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಡಿಕೆ ಶಿವಕುಮಾರ್ ಅವರನ್ನ ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿದರು.

ಪೆನ್ನಡ್ರೈವ್ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಬೇಕು ಇದರ ಹಿಂದೆ ಡಿಸಿಎಂ ಡಿಕೆಶಿ ಕೈವಾಡವಿದೆ ಪ್ರಕರಣದ ತನಿಖೆಗೆ ಆಗಬೇಕು ಡಿಕೆಶಿ ಅಲ್ಲ ಆತ ಡಿಕೆ’ಛೀ’ ಅಂತ ವಾಗ್ದಾಳಿ ನಡೆಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.

Share this Article