ತಡರಾತ್ರಿ 40 ವರ್ಷದ ಸೇತುವೆ ಕುಸಿತ ಕಾರವಾರ-ಗೋವಾ ರಸ್ತೆ ಬಂದ

ಸಮಗ್ರ ಪ್ರಭ ಸುದ್ದಿ
1 Min Read
Oplus_131072

ಕಾರವಾರ: ಕಾಳಿ ನದಿಗೆ ಅಡ್ಡಲಾಗಿ 40 ವರ್ಷದ ಹಿಂದೆ ಕಟ್ಟಿದ್ದ ಸೇತುವೆ ಕಡ ರಾತ್ರಿ ಕುಸಿದು ಬಿದ್ದ ಪರಿಣಾಮ ತಮಿಳುನಾಡು ಮೂಲದ ಲಾರಿಯೊಂದು ನದಿಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಸೇತುವೆ ಕುಸಿದಿದ್ದು, ಘಟನೆಯಲ್ಲಿ ಲಾರಿ ಚಾಲಕ ಬಾಲಮುರುಗನ್ ಗೋವಾದಿಂದ ಹುಬ್ಬಳ್ಳಿಗೆ ತೆರಳುತಿದ್ದ ಖಾಲಿ ಲಾರಿ ಕಾಳಿನದಿಯ ಸೇತುವೆಮೇಲೆ ವೇಗವಾಗಿ ಹೋಗುತ್ತಿದ್ದ ವೇಳೆ ಸೇತುವೆ ಕುಸಿದಿದೆ. ಈ ವೇಳೆ ಚಾಲಕ ಲಾರಿಯ ಕ್ಯಾಬಿನ್ ಮೇಲೆ ನಿಂತು ಕೂಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಕರಾವಳಿ ಕಾವಲು ಪಡೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಆಗಮಿಸಿದ ಕರಾವಳಿ ಕಾವಲುಪಡೆ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ಲಾರಿ ಚಾಲಕನನ್ನು ರಕ್ಷಣೆ ಮಾಡಲಾಗಿದೆ.

Share this Article