ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ. ರಾಜ್ಯಪಾಲರ ಕ್ರಮವನ್ನು ಎತ್ತಿಹಿಡಿದಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಈ ಬಗ್ಗೆ ರಾಜ್ಯಪಾಲರಿಗೆ ಖಾಸಗಿ ವ್ಯಕ್ತಿಗಳಿಂದ ದೂರು ಬಂದಿತ್ತು. ಈ ಬಗ್ಗೆ ಕ್ರಮ ಕೈಗೊಂಡ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಿಸಿ ತನಿಖೆ ನಡೆಸಲು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದರು. ರಾಜ್ಯಪಾಲರ ಈ ಕ್ರಮವನ್ನು ಪ್ರಶ್ನೆ ಮಾಡಿ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ವಾದ ವಿವಾದ ಆಲಿಸಿ ಹೈಕೋರ್ಟ್ನಎಂ ನಾಗಪ್ರಸನ್ನ ಅವರ ಏಕ ಸದಸ್ಯ ಪೀಠವು ಮಂಗಳವಾರ ತೀರ್ಪು ಪ್ರಕಟಿಸಿದೆ. ರಾಜ್ಯಪಾಲರು ಪ್ರಾಸಿಕ್ಯೂಶನ್ಗೆ ನೀಡಿರುವ ಅನುಮತಿ ಸರಿಯಾಗಿದೆ. ತಡೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.