ಗದಗ: ಕಂದಾಯ ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆಗೆ ಆಗ್ರಹಿಸಿ ಇಂದು ಅನಿರ್ದಿಷ್ಟ ಅವಧಿ ಮುಷ್ಕರವನ್ನು ನಗರದ ತಹಶಿಲ್ದಾರ ಕಛೇರಿ ಆವರಣದಲ್ಲಿ ತಮ್ಮ ಸೇವೆ ಸ್ಥಗಿತಗೊಳಿಸಿ ಧರಣಿ ಕುಳಿತು ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಕರ್ಯ ಗ್ರಾಮಗಳಲ್ಲಿ ಹಾಗೂ ತಾಲೂಕು ಕೇಂದ್ರದಲ್ಲಿ ಕಾರ್ಯ ನಿರ್ವಹಿಸಲು ಸರಿಯಾದ ಕಛೇರಿಗಳಿಲ್ಲ ಜೊತೆಗೆ ಅತಂರ ಜಿಲ್ಲಾ ವರ್ಗಾವಣೆ ಸಮಸ್ಯೆ ಸೇರಿದಂತೆ ಪ್ರಯಾಣ ಭತ್ಯೆ ದರ ಹೆಚ್ಚಳ,ಮೊಬೈಲ್ ಆಪ್ ಬಳಕೆ ಕೆಲಸ ನಿರಂತವಾಗಿ ಮಾಡಬೇಕಾದರೆ
ಅತ್ಯುತ್ತಮ ಗುಣಮಟ್ಟದ ಮೊಬೈಲ್ ನೀಡಬೇಕು ಕಛೇರಿಯಲ್ಲಿ ಪ್ರಿಂಟರ್ ಮತ್ತು ಸ್ಕ್ಯಾನರ್ ವ್ಯವಸ್ಥೆ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟ ಇಂದು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಸರ್ಕಾರದ ವಿರುದ್ದ ಗ್ರಾಮ ಆಡಳಿತ ಅಧಿಕಾರಿಗಳು ಧರಣಿ ನಡೆಸಿದ್ದಾರೆ ಕೂಡಲೇ ಸರ್ಕಾರ ನಮ್ಮ ಕೆಲಸ ಮಾಡಲು ಅಗತ್ಯ ಮೂಲಭೂತ ಸೌಕರ್ಯಗಳ ಜೊತೆಗೆ ನಮ್ಮ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.
