ರಾಜ್ಯದ ಮುಂದಿನ 5 ದಿನ ಮಳೆ ಮುನ್ಸೂಚನೆ

ಸಮಗ್ರ ಪ್ರಭ ಸುದ್ದಿ
1 Min Read

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಕಳೆದ ಒಂದು ವಾರದಿಂದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುತ್ತಿದೆ. ಹಾಗೆಯೇ ಇಂದಿನಿಂದ ಮುಂದಿನ ಐದು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಅಕ್ಟೋಬರ್ 16 ಮತ್ತು 17ರಂದು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಮತ್ತೆ ಹೆಚ್ಚಾಗಿದೆ ಎಂದು ಐಎಂಡಿ ವಿಜ್ಞಾನಿ ಸಿ.ಎಸ್.ಪಾಟೀಲ್ ಅವರು ಹೇಳಿದ್ದಾರೆ. ಇನ್ನು ಮುಂದಿನ 5 ದಿನಗಳ ಕಾಲ ರಾಜ್ಯದಾದ್ಯಂತ ವ್ಯಾಪಕವಾಗಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದ್ದಾರೆ.

 

 

Share this Article