ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ನಿಗದಿ

ಸಮಗ್ರ ಪ್ರಭ ಸುದ್ದಿ
1 Min Read

ನವದೆಹಲಿ:ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕವನ್ನು ಮಂಗಳವಾರ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ, ರಾಮನಗರ ಜಿಲ್ಲೆಯ ಚನ್ನಪಟ್ಟಣ ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರಗಳಿಗೆ ನವೆಂಬರ್ 13 ರಂದು ಮತದಾನ ನಡೆಯಲಿದ್ದು, ನ.23ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಉಪ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದರು.

ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಚನ್ನಪಟ್ಟಣ, ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾಂವಿ ಮತ್ತು ಈ.ತುಕಾರಾಂ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಈ ಮೂವರು ಸಂಸದರಾಗಿ ಆಯ್ಕೆಯಾದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯುತ್ತಿದೆ.

ದೇಶಾದ್ಯಂತ ಒಟ್ಟು 47 ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ.

Share this Article