ಗದಗ: ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಸೋಮವಾರ ಮಾಜಿ ಸಚಿವ ಕಳಕಪ್ಪ ಬಂಡಿ ಸಾರ್ವಜನಿಕವಾಗಿ ತಹಶೀಲ್ದಾರ ಕಿರಣ ಕುಮಾರ ಕುಲಕರ್ಣಿ ಇವರಿಗೆ ಏಕವಚನದಲ್ಲಿ ನಿಂದಿಸಿದ್ದರು ಸಾರ್ವಜನಿಕವಾಗಿ ತಾಲೂಕು ದಂಡಾಧಿಕಾರಿಗೆ ನಿಂದ್ದಿಸಿದ್ದನ್ನು ಖಂಡಸಿ ಮಾಜಿ ಸಚಿವ ಕಳಕಪ್ಪ ಬಂಡಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಸರಕಾರಿ ಕಂದಾಯ ನೌಕರರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸೋಮವಾರ ರಂದು ರಾಜ್ಯಾದ್ಯಂತ ರೈತರ, ದೇವಾಲಯ ಹಾಗೂ ಮಠ-ಮಾನ್ಯಗಳ ಆಸ್ತಿಗಳ ಮೇಲೆ ವಕ್ಫ ಬೋರ್ಡ್ ಹೆಸರು ದಾಖಲಿಸುತ್ತಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ಪ್ರತಿಭಟನೆ ನಡೆಸಿತ್ತು ಗಜೇಂದ್ರಗಡ ಪಟ್ಟಣದಲ್ಲಿ ಮಾಜಿ ಸಚಿವ ಕಳಕಪ್ಪ ಬಂಡಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು ಇದೇ ಸಂದರ್ಭದಲ್ಲಿ ಗಂಜೇದ್ರಗಡ ತಹಶೀಲ್ದಾರ ಮನವಿ ಸ್ವೀಕರಿಸಲು ತಡವಾಗಿ ಬಂದ ಕಾರಣಕ್ಕೆ ಸಚಿವ ಕಳಕಪ್ಪ ಕಿರಣಕುಮಾರ ಕುಲಕರ್ಣಿ ಅವರಿಗೆ ಸಾರ್ವಜನಿಕವಾಗಿ ಏಕವಚನದಲ್ಲಿ ಬೈದು ನಿಂದಿಸಿದ್ದಾರೆ ಕರ್ತವ್ಯ ನಿರ್ವಹಿಸಲು ಮಾನಸಿಕವಾಗಿ ಮತ್ತು ನೈತಿಕವಾಗಿ ಅಧಿಕಾರಿಗಳನ್ನು ಕುಗ್ಗಿಸುವ ಕೆಲಸ ಮಾಡಿದ್ದಾರೆ ಕೂಡಲೇ ಸರ್ಕಾರಿ ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ನೀಡಿ ಕಳಕಪ್ಪ ಬಂಡಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ಕಂದಾಯ ನೌಕರರ ಸಂಘದ ಗದಗ ಜಿಲ್ಲಾ ಗೌರವಾಧ್ಯಕ್ಷ ಎಸ್ ಎಂ ಹಿರೇಮಠ, ಜಿಲ್ಲಾಧ್ಯಕ್ಷ ಡಿ ಟಿ ವಾಲ್ಮೀಕಿ,ಬಿ ಎಸ್ ಕನ್ನೂರ,ಎಂ ಎ ನಧಾಪ, ಕೆ ಎಚ್ ಓಲೇಕಾರ,ಬಿ ವ್ಹಿ ಕಾಸರ,ಅರುಣಕುಮಾರ ಮಂಟೂರ ಸೇರಿದಂತೆ ಜಿಲ್ಲೆಯ ಕಂದಾಯ ಅಧಿಕಾರಿಗಳು ಹಾಜರಿದ್ದರು.