ಬೆಂಗಳೂರು : ಕರ್ನಾಟಕ ಎಸ್ಎಸ್ಎಲ್‌ಸಿ ಫಲಿತಾಂಶವನ್ನು ನಾಳೆ (ಮೇ.02) ಮಧ್ಯಾಹ್ನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಕಟ ಮಾಡಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025ರ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ SSLC ಪರೀಕ್ಷೆಯನ್ನು ನಡೆಸಿತ್ತು. ಕರ್ನಾಟಕದಾದ್ಯಂತ 15,881 ಪ್ರೌಢಶಾಲೆಗಳಿಂದ 4,61,563 ಹುಡುಗರು ಮತ್ತು 4,34,884 ಹುಡುಗಿಯರು ಪರೀಕ್ಷೆಗೆ ದಾಖಲಾಗಿದ್ದರು. ಮೌಲ್ಯಮಾಪನ ಕಾರ್ಯ ಮುಗಿದಿದ್ದು ಫಲಿತಾಂಶ ನಾಳೆ ಹೊರ ಬೀಳಲಿದೆ.
ವಿದ್ಯಾರ್ಥಿಗಳು ತಮ್ಮ ರೋಲ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ KSEAB ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಲಭ್ಯವಿರುವ ಫಲಿತಾಂಶಗಳನ್ನು ಪರಿಶೀಲಿಸಬಹುದು
ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
