ಗಜೇಂದ್ರಗಡ:ಜಗದ್ಗುರು ತೋಂಟದಾರ್ಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್ ಎಸ್ ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದಾರೆ.
ವಿನಾಯ ಕರಡೆ 600 (ಶೇ. 96) ಪ್ರಥಮ, ವೀರಭದ್ರಯ್ಯ ಗಂಟೆಮಠ 596 (ಶೇ. 95.36) ದ್ವಿತೀಯ ಹಾಗೂ ಜ್ಯೋತಿ ಅವದೂತ 571 (ಶೇ. 91.39) ತೃತೀಯ ಸ್ಥಾನ ಪಡೆದಿದ್ದಾರೆ.
ಜಗದ್ಗುರು ತೋಂಟದ ಡಾ. ಸಿದ್ದರಾಮ ಮಹಾಸ್ವಾಮಿಗಳು, ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟರ, ಮುಖ್ಯೋಪಾಧ್ಯಾಯರು, ಗುರುವೃಂದ, ಗ್ರಾಮದ ಶಿಕ್ಷಣ ಪ್ರೇಮಿಗಳು, ಹಿರಿಯರು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
