ಗಜೇಂದ್ರಗಡ: ಜೀವನದಲ್ಲಿ ಗುರಿ ತಲುಪಬೇಕಾದರೆ ವಿದ್ಯಾರ್ಥಿಗಳಲ್ಲಿ ಓದುವ ಛಲ ಬೆಳೆಸಿಕೊಳ್ಳಬೇಕು ಎಂದು ನರೇಗಲ್‌ನ ನಿವೃತ್ತ ಪ್ರಾಚಾರ್ಯ ಬಿ. ಎಸ್. ಚೇಗರಡ್ಡಿ ಹೇಳಿದರು.
ಗಜೇಂದ್ರಗಡ ನಗರದ ಪುರ್ತಗೇರಿ ಕ್ರಾಸ್ ಬಳಿ ಇರುವ ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿವಿಧ ಸಾಂಘಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಅಂಗವಾಗಿ ಶುಕ್ರವಾರ ನಡೆದ ʼಸಿಂಧೂರ-2025ʼ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ತಂದೆ, ತಾಯಿ, ಗುರುಗಳ ಋಣವನ್ನು ತೀರಿಸಲು ಪ್ರಾಮಾಣಿಕ ಓದು, ಬರಹ, ಕಲಿಕೆಯನ್ನು ಅಳವಡಿಸಿ ಕೊಳ್ಳಬೇಕು. ಆತ್ಮವಿಶ್ವಾಸ ವೃದ್ಧಿಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧಕರಾಗಿ ಹೊರ ಹೊಮ್ಮಬೇಕೆಂದು
ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಶೈಕ್ಷಣಿಕ ಸಲಹೆಗಾರ ಬಿ. ಎಸ್. ಗೌಡರ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್, ಅಂತರ್ಜಾಲ, ಟಿ.ವಿ. ಗಳಿಂದ ದೂರ ಇದ್ದು, ಒಳ್ಳೆಯ ಆಸಕ್ತಿ, ಆಲೋಚನೆ ಹಾಗೂ ಶ್ರದ್ಧಾಭಕ್ತಿಗಳನ್ನು ಸತ್ಪ್ರಜೆಗಳಾಗಿ ಬಾಳಿ ಭವ್ಯ ಭಾರತದ ಆಸ್ತಿಗಳಾಗುವಂತೆ ಹಾಗೂ ಮನಸ್ಸಿನ ಆಕರ್ಷಣೆಗಳು ತಾತ್ಕಾಲಿಕವಾಗಿದ್ದು, ಅವುಗಳ ಹಿಂದೆ ಹೋದವರು ಜೀವನದಲ್ಲಿ ನೊಂದಿರುವ ನಿದರ್ಶನಗಳು ಹೆಚ್ಚಾಗಿವೆ. ಕಾಲೇಜು ಸಂದರ್ಭದಲ್ಲಿ ಉತ್ತಮ ಸ್ನೇಹ ಗಳಿಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದರು.
ಈ ವೇಳೆ ಪಿಯು ಪ್ರಾಚಾರ್ಯ ವಸಂತರಾವ್ ಗಾರಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಜಾಗತಿಕ ಶೈಕ್ಷಣಿಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಸ್ವಯಂ ಪ್ರೇರಣೆ ಪ್ರಮುಖವಾಗಿದೆ. ಸಂಸ್ಥೆಯ ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಬೇಕು ಹಾಗೆ ಸಾಧಕರಾಗಬೇಕಾದರೆ ಅಧ್ಯಯನಶೀಲ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಕಳೆದ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ಆಡಳಿತ ಮಂಡಳಿಯವರನ್ನು ಸನ್ಮಾನಿಸಲಾಯಿತು. ಈ ವೇಳೆ ಆಡಳಿತ ಮಂಡಳಿ ಸದಸ್ಯರಾದ ಸದಾಶಿವ ಕರಡಿ, ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಶಾಲೆ ಚೇರನ್ನರಾದ ಶರಣಪ್ಪ ಕೆ. ರೇವಡಿ, ಅನ್ನದಾನೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಚೇರನ್ನರಾದ ಪ್ರಭು ಎನ್. ಚವಡಿ, ಐಟಿಐ ಪ್ರಾಚಾರ್ಯ ಎ. ಪಿ. ಗಾಣಗೇರ, ಪದವಿ ಪ್ರಾಚಾರ್ಯ ಬಸಯ್ಯ ಎಸ್. ಹಿರೇಮಠ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷ ಮಂಜುನಾಥ ಕಾಡದ ಹಾಗೂ ಸಿಬ್ಬಂದಿಗಳು, ಪಾಲಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

