ಬಾಗಲಕೋಟೆ ಜಿಲ್ಲೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಾಗಲಕೋಟೆ ಜಿಲ್ಲಾ ಘಟಕದಿಂದ ಹಿರಿಯ ಪತ್ರಕರ್ತ ದಿ.ಶ್ರೀಶೈಲ್ ಅಂಗಡಿ ಸ್ಮರಣಾರ್ಥ ನೀಡುವ ಅತ್ಯುತ್ತಮ ಗ್ರಾಮೀಣ ಪತ್ರಕರ್ತ ಪ್ರಶಸ್ತಿಗೆ ಉದಯವಿಜಯ ದಿನಪತ್ರಿಕೆ ಸಂಪಾದಕರು ಹಾಗೂ ಯುವ ಪತ್ರಕರ್ತರಾದ ಪ್ರಕಾಶ ಆರ್. ಗುಳೇದಗುಡ್ಡ ಅವರು ಆಯ್ಕೆಯಾಗಿದ್ದಾರೆ.
ಇವರ ಪತ್ರಿಕಾರಂಗದ ಅನುಪಮ ಸೇವೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಜುಲೈ. 31 ರ ಗುರುವಾರದಂದು ಬಾಗಲಕೋಟೆ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಕಾಶ ಗುಳೇದಗುಡ್ಡ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಆನಂದ ದಲಭಂಜನ ತಿಳಿಸಿದ್ದಾರೆ.
