ಶನಿವಾರ ಕುರುಬ ಸಂಘದ ರಜತ ಮಹೋತ್ಸವಕ್ಕೆ ಸಿಎಂ ಆಗಮನ : ಶಾಸಕ ಜಿ ಎಸ್ ಪಾಟೀಲ

Samagraphrabha
1 Min Read

ಗದಗ: ಗದಗ ತಾಲೂಕು ಕುರುಬರ ಸಂಘದ ಆಶ್ರಯದಲ್ಲಿ ಸಂಘದ ರಜತ ಮಹೋತ್ಸವ, ಸ್ಮರಣ ಸಂಚಿಕೆ ಬಿಡುಗಡೆ, ರಾಜ್ಯ ಮಟ್ಟದ ಕನಕೋತ್ಸವ ಹಾಗೂ ಫಕೀರಪ್ಪ ಹೆಬಸೂರ ಅವರ ಅಭಿನಂದನಾ ಗ್ರಂಥ ಸಮರ್ಪಣೆ ಕಾರ್ಯಕ್ರಮವನ್ನು ಸೆ. 20ರಂದು ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.20ರಂದು ಬೆಳಿಗ್ಗೆ 11ಕ್ಕೆ ನಗರದ ಮುಳಗುಂದ ರಸ್ತೆಯ ಕನಕಭವನದ ರಾಕೇಶ ಸಿದ್ದರಾಮಯ್ಯ ಸಭಾಂಗಣದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಅಭಿನಂದನಾ ಗ್ರಂಥವನ್ನು ಬಿಡುಗಡೆಗೊಳಿಸುವರು. ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಾಮಫಲಕ ಅನಾವರಣಗೊಳಿಸುವರು. ಫಕೀರಪ್ಪ ಹೆಬಸೂರ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ, ರಾಜ್ಯ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ, ಕಾರ್ಮಿಕ ಅಚಿವ ಸಂತೋಷ ಲಾಡ್, ಶಾಸಕರಾದ ಬಸವರಾಜ ಶಿವಣ್ಣವರ, ಎಚ್‌.ವೈ. ಮೇಟಿ, ರಾಘವೇಂದ್ರ ಹಿಟ್ನಾಳ, ಬಿ.ಜಿ. ಗೋವಿಂದಪ್ಪ, ಪ್ರಸಾದ ಅಬ್ಬಯ್ಯ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಬೆಳಗಾವಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಫ್.ಎನ್. ಗಾಜಿಗೌಡರ ಪಾಲ್ಗೊಳ್ಳುವರು ಎಂದು ವಿವರಿಸಿದರು.

- Advertisement -
Ad image

ಸುದ್ದಿಗೋಷ್ಠಿಯಲ್ಲಿ ತಾಲೂಕು ಕುರುಬರ ಸಂಘದ ರಜತ ಮಹೋತ್ಸವದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಬಿ.ಆರ್. ಯಾವಗಲ್‌, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಫಕೀರಪ್ಪ ಹೆಬಸೂರ, ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ, ಪ್ರಕಾಶ ಕರಿ, ರಾಮಕೃಷ್ಣ ರೊಳ್ಳಿ ಸೇರಿದಂತೆ ಇತರರು ಇದ್ದರು.

Share this Article