ಪಂಚಮಸಾಲಿ ಪೀಠದಿಂದ ಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ!

Samagraphrabha
1 Min Read

ಬಾಗಲಕೋಟೆ: ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದೆ. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿ ಪಂಚಮಸಾಲಿ ಸಮುದಾಯದ ಪ್ರಥಮ‌ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಮಾಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದರು.

ಲಿಂಗಾಯತ ಧರ್ಮ ವಿರೋಧಿ ಹೇಳಿಕೆ, ಅಕ್ರಮ ಆಸ್ತಿ ಗಳಿಕೆ ಸೇರಿದಂತೆ ಸ್ವಾಮೀಜಿ ಮೇಲೆ ಹಲವು ಆರೋಪ ಹೊರಿಸಿ, ಪೀಠದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಅಸೂಟಿ ಹೇಳಿದರು. ರವಿವಾರ ನಡೆದ ಸಭೆಯಲ್ಲಿ ಸ್ವಾಮೀಜಿಯನ್ನು ಉಚ್ಛಾಟಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. ಸ್ವಾಮೀಜಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದಾರೆ. ಈ ಬಗ್ಗೆ 2014ರಲ್ಲಿ ಸ್ವಾಮೀಜಿಗೆ ನೋಟಿಸ್ ನೀಡಿದ್ದೇವು ಎಂದು ನೀಲಕಂಠ ಅಸೂಟಿ ಹೇಳಿದರು.

Share this Article