ಕಾಂಗ್ರೆಸ್ ಪಕ್ಷದಲ್ಲಿ ಉಸಿರು ಗಟ್ಟುವ ವಾತಾವರಣಕ್ಕೆ ಬೇಸತ್ತು ಬಿಜೆಪಿ ಸೇರ್ಪಡೆ

graochandan1@gmail.com
1 Min Read

 

ನರೇಗಲ್: ಕಳೆದ ಸುಮಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತನಾಗಿ ಕಾರ್ಯವನ್ನು ಮಾಡುತ್ತಾ ಬಂದಿದ್ದೆ.ಆದರೆ ಇತ್ತಿಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಸಿರು ಗಟ್ಟುವ ವಾತಾವರಣ ನಿರ್ಮಾಣವಾಗಿದೆ ಇದಕ್ಕೆ ಬೇಸತ್ತು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ನರೇಗಲ್ ಪಟ್ಟಣ ಪಂಚಾಯತಿ ಸದಸ್ಯ ರಾಚಯ್ಯ ಮಾಲಗಿತ್ತಿಮಠ ಹೇಳಿದರು.

 

- Advertisement -
Ad image

 

ನರೇಗಲ್ ಪಟ್ಟಣದಲ್ಲಿ ನಡೆದ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೇಂದ್ರದಲ್ಲಿನ ಮೋದಿಯವರ ಜನಪ್ರೀಯತೆ, ಜನಪರ ಯೋಜನೆ ಹಾಗೂ ಕಳಕಪ್ಪ ಬಂಡಿ ಅವರು ಹಿಂದೆದೂ ಆಗದ ಕುಡಿಯುವ ನೀರಿನ ಸಮಸ್ಯೆಯನ್ನು ಬಗ್ಗೆ ಹರಿಸಿದ್ದಾರೆ, ಸೂರು ರಹಿತರಿಗೆ ಸೂರನ್ನು ನೀಡಿದ್ದಾರೆ, ಶೈಕ್ಷಣಿಕವಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ ಇಂತಹ ಅಭಿವೃದ್ಧಿ ಪರ ಒಲವು ಇರುವ ಪಕ್ಷಕ್ಕೆ ದುಡಿದು ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸುತ್ತೇನೆ ಎಂದರು.

ಬಳಿಕ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಕಳಕಪ್ಪ ಬಂಡಿ ಮಾತನಾಡಿ ರಾಚಯ್ಯ ಮಾಲಗಿತ್ತಿಮಠ ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಳ್ಳುತ್ತೇನೆ. ಬಿಜೆಪಿ ಪಕ್ಷವೂ ಸಾಮಾನ್ಯ ಜನಪರ ಕಾರ್ಯಕರ್ತರ ಪಕ್ಷ ಇಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕಾಗುತ್ತದೆ.ರೋಣ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಪ್ರತಿಯೊಬ್ಬ ಕಾರ್ಯಕರ್ತನೂ ಸಹ ಬಿಜೆಪಿ ಅಭ್ಯರ್ಥಿಯೇ ಹೀಗಾಗಿ ಮತದಾನಕ್ಕೆ ಇನ್ನು ಕೆಲವು ದಿನಗಳು ಬಾಕಿ ಇದ್ದು ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಮತ ಹಾಕಿಸಬೇಕೆಂದು ವಿನಂತಿ ಮಾಡಿದರು.

ಇದೇ ಸಂದರ್ಭದಲ್ಲಿ ಬಿಜೆಪಿರೋಣ ಮಂಡಳದ ಅಧ್ಯಕ್ಷ ಮುತ್ತಣ್ಣ ಕಡಗದ, ಉಮೇಶ ಮಲ್ಲಾಪೂರ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮಾಜಿ ನಾಮ ನಿರ್ದೇಶನ ಸದಸ್ಯ ಕುಮಾರ ಅಮಾತಿಗೌಡ್ರ, ಶಿವಾನಂದ ಮಠದ,ಬಾಳನಗೌಡ ಗೌಡರ ಸೇರಿದಂತೆ ಅನೇಕರು ಇದ್ದರು.

Share this Article