ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕಾರ

ಸಮಗ್ರ ಪ್ರಭ ಸುದ್ದಿ
1 Min Read

ಬೆಂಗಳೂರು: ಸಿದ್ದರಾಮಯ್ಯ ಎಂಬ ಹೆಸರಿನ ನಾನು, ಕರ್ನಾಟಕದ ರಾಜ್ಯದ ಮುಖ್ಯಮಂತ್ರಿಯಾಗಿ ಕರ್ತವ್ಯವನ್ನು ಭಯ, ಪಕ್ಷಪಾತ ಇಲ್ಲದೆ, ಎಲ್ಲರಿಗೂ ಸಂವಿಧಾನಕ್ಕೆ ಅನುಸಾರವಾಗಿ ನ್ಯಾಯವಾದುದನ್ನೇ ಕರ್ತವ್ಯ ನಿರ್ವಹಣೆ ಮಾಡುತ್ತೇನೆ ಎನ್ನುವ ಮೂಲಕ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಎಲ್ಲರಿಗೂ ಪ್ರಮಾಣ ವಚನ ಬೋಧಿಸಿದರು. ಬಳಿಕ ಪತ್ರಗಳಿಗೆ ಸಹಿ ಹಾಕುವ ಮೂಲಕ ಅಧಿಕೃತವಾಗಿ ರಾಜ್ಯದ ಮುಖ್ಯಮಂತ್ರಿಯಾದರು.

ಇದೇ ವೇಳೆ ವಿಧಾನಸೌಧದಲ್ಲಿ ಬಸವರಾಜ ಬೊಮ್ಮಾಯಿ ಅವರ ಬೋರ್ಡ್ ತೆಗೆದು, ಸಿದ್ದರಾಮಯ್ಯ ಅವರ ನಾಮಫಲಕ ಹಾಕಲಾಯಿತು.

ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ: 

ರಾಜ್ಯಪಾಲರ ನೇತೃತ್ವದಲ್ಲಿ ಡಿಕೆ ಶಿವಕುಮಾರ್, ಉಪಮುಖ್ಯಮಂತ್ರಿಯಾಗಿ, ಗಂಗಾಧರ್ ಅಜ್ಜನ ಹೆಸರಲ್ಲಿ ಪ್ರಮಾಣ ಮಾಡಿದರು.

ಪ್ರಮಾಣವಚನ ಸ್ವೀಕರಿಸಿದ 8 ಸಚಿವರು: 
ಶಾಸಕರಾದ ಜಿ ಪರಮೇಶ್ವರ್, ಕೆ,ಎಚ್ ಮುನಿಯಪ್ಪ, ಕೆ,ಜೆ.ಜಾರ್ಜ್, ಸತೀಶ್ ಜಾರಕಿಹೊಳಿ,ಎಂ ಬಿ ಪಾಟೀಲ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಜಮೀರ್ ಅಹ್ಮದ್ ಖಾನ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಇಂಗ್ಲೀಷಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಜಮೀರ್ ಅಹ್ಮದ್ ಖಾನ್

ಎಲ್ಲಾ 7 ಸಚಿವರು ಹಾಗೂ ಸಿಎಂ, ಡಿಸಿಎಂ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರೆ, ಜಮೀರ್ ಅಹ್ಮದ್ ಖಾನ್ ಮಾತ್ರ ಇಂಗ್ಲೀಷಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಹಾಗೂ ಅಲ್ಲಾ ಮತ್ತು ತಾಯಿಯ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

Share this Article