ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

ಸಮಗ್ರ ಪ್ರಭ ಸುದ್ದಿ
1 Min Read

 

ಬೆಂಗಳೂರು: ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಸಂಪೂರ್ಣ ಉಚಿತವಾಗಿರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ರಾಜ್ಯದ ಜನತೆಗೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಭರವಸೆಯನ್ನು ಯಾವುದೇ ಷರತ್ತುಗಳಿಲ್ಲದೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರಿ ಬಸ್ಸುಗಳಲ್ಲಿ ಬಿಪಿಎಲ್ ಕಾರ್ಡು ಇದ್ದ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಿಸಬಹುದು ಎಂಬ ಷರತ್ತು ವಿಧಿಸಿಲ್ಲ. ಬಿಪಿಎಲ್-ಎಪಿಎಲ್ ಕಾರ್ಡು ಹೊಂದಿರುವ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ಎಂದರು.

ಸಾರಿಗೆ ಅಧಿಕಾರಿಗಳು ಮೂರ್ನಾಲ್ಕು ಆಯ್ಕೆಗಳನ್ನು ಕೊಟ್ಟಿದ್ದಾರೆ. ಕಂಡಿಷನ್ ಬಗ್ಗೆ ಸರ್ಕಾರ ಹೇಳಲಿ ಆದರೆ ಎಲ್ಲಾ ಮಹಿಳೆಯರಿಗೆ ಉಚಿತ ಅನ್ನೋದು ನಮ್ಮ ಪ್ರಣಾಳಿಕೆಯಾಗಿತ್ತು. ನಾಳೆ ಸಚಿವ ಸಂಪುಟದಲ್ಲಿ ಸಾರಿಗೆ ಇಲಾಖೆ ವರದಿ ಕೊಡುತ್ತೇವೆ. ನಾಳೆ ಉಚಿತ ಬಸ್‌ ಪ್ರಯಾಣ ಗ್ಯಾರಂಟಿ ಜಾರಿಗೆ ಬರುವುದರಲ್ಲಿ ಅನುಮಾನವೇ ಇಲ್ಲ ಎಂದರು.

ಯೋಜನೆ ಜಾರಿಗೆ ಪ್ರತಿವರ್ಷ ಅಂದಾಜು 3,200 ಕೋಟಿ ಹಣ ಬೇಕಾಗುತ್ತದೆ. ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ನಷ್ಟದಲ್ಲಿರುವ ಹಿನ್ನೆಲೆ ಸರ್ಕಾರ ಸಹಾಯಧನ ನೀಡಿದರೇ ಯೋಜನೆ ಜಾರಿಗೆ ಮಾಡಲು ಅನುಕೂಲವಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

Share this Article