ಗದಗ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗ ಹಾಗೂ ಗದಗ ಜಿಲ್ಲಾ ಆಯುಷ್ ಇಲಾಖೆಯ ಸಹಯೋಗದಲ್ಲಿ ಗದಗ ತಾಲ್ಲೂಕಿನ ದುಂದೂರು ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಜರುಗಿತು.
ಉಚಿತ ಆರೋಗ್ಯ ಶಿಬಿರಕ್ಕೆ ಚಿಕ್ಕಹಂದಿಗೋಳ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ನಾರಾಯಣ ಗೌಡ ಮೇಟಿ ಹಾಗೂ ಪಂಚಾಯತ್ ಸದಸ್ಯ ಶ್ರೀನಿವಾಸ ದ್ಯಾವನೂರ ಅವರು ಚಾಲನೆ ನೀಡಿ ಮಾತನಾಡಿದ ಅವರು ಗ್ರಾಮೀಣ ಆರೋಗ್ಯ ಮತ್ತು ನೈರ್ಮಲ್ಯ ಅಗತ್ಯವಾದ ಮೂಲಭೂತ ವಿಷಯವಾಗಿದೆ. ಗ್ರಾಮದ ಅಭಿವೃದ್ಧಿಗೆ ನಾಗರಿಕ ಆರೋಗ್ಯ ಮತ್ತು ಸಾರ್ವಜನಿಕ ಆರೋಗ್ಯದ ಕಾಳಜಿ ಬಹು ಮುಖ್ಯ ಅದ್ದರಿಂದ ಗ್ರಾಮದ ಜನತೆಗೆ ಸಾಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಗ್ರಾಮದಲ್ಲೇ ಸಿಗುವಂತೆ ಆಗಲಿ ಎಂದು ಗ್ರಾಮದ ಅಧ್ಯಯನಕ್ಕೆ ಬಂದಿರುವ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಈ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಜಿಲ್ಲಾ ಆಯುಷ್ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಿದ್ದಾರೆ ಇದರ ಸದುಪಯೋಗ ಗ್ರಾಮಸ್ಥರಿಗೆ ಪಡೆದುಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಗಳಾದ ಡಾ. ಎಂ. ಎಸ್. ಉಪ್ಪಿನ್ ಮಾತನಾಡಿ ಯಾವುದೇ ರೂಪದಲ್ಲಿ ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕು ಹಾಗೂ ಸಾರ್ವಜನಿಕ ಸೇವೆಗೆ ನಾವು ಸದಾ ಒಳಗಾಗಬೇಕು ಎಂಬ ಉದ್ದೇಶದಿಂದ ಇಂತಹ ಸಾರ್ವಜನಿಕ ಉಚಿತ ಆರೋಗ್ಯ ಪರೀಕ್ಷೆ ಮತ್ತು ಔಷಧಿಗಳ ವಿತರಣೆಯ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೇವೆ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ದುಂದೂರು ಗ್ರಾಮದಲ್ಲಿ ವಾಸ್ತವ್ಯ ಇದ್ದು ಗ್ರಾಮಸ್ಥರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಸಂತಸ ತಂದಿದೆ ಎಂದರು.
ಉಚಿತ ಆರೋಗ್ಯ ತಪಾಸಣೆಯ ಶಿಬಿರದಲ್ಲಿ ಗ್ರಾಮದ 150 ಕ್ಕೂ ಹೆಚ್ಚು ಜನ ಆರೋಗ್ಯ ತಪಾಸಣೆಗೆ ಒಳಗಾದರು. ರಕ್ತದ ಒತ್ತಡ, ಸಕ್ಕರೆ ಕಾಯಿಲೆ ಪರೀಕ್ಷೆ, ಬಿಎಂಆಯ್ ಪರೀಕ್ಷೆ, ಮಂಡೆ ನೋವು, ಚರ್ಮದ ಭಾದೆ, ಕೆಮ್ಮು, ಜ್ವರ, ನೆಗಡಿ ಇತ್ಯಾದಿ ಆರೋಗ್ಯ ಸಮಸ್ಯೆಗಳಿಗೆ ತಪಾಸಣೆ ಮಾಡಿ ಔಷಧಿ ವಿತರಿಸಲಾಯಿತು.
ಆಯುಷ್ ವೈದ್ಯಾಧಿಕಾರಿಗಳಾದ ಡಾ. ಕಮಲಾಕರ ಅರಳೆ, ಡಾ ಪೀಲೋಮಿನಾ, ಡಾ. ಕುಶಾಲ್ ಹಾಗೂ ದುಂದೂರು ಗ್ರಾಮದ ಸಮುದಾಯ ಆರೋಗ್ಯಾಧಿಕಾರಿ ಲಲಿತಾ ದಂಡಿ, ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಂ. ಬಿ. ಚನ್ನಪ್ಪಗೌಡರ, ಪ್ರವೀಣ್ ಅಂಕಲಕೋಟಿ, ಪ್ರಕಾಶ ಮಾಚೇನಹಳ್ಳಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.