ಕಾನೂನು ಇಲಾಖೆ ಮುಂದೆ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಕುರಿತಾದ ಪ್ರಸ್ತಾವನೆ ಬಂದಿಲ್ಲ: ಸಚಿವ ಎಚ್.ಕೆ.ಪಾಟೀಲ್

ಸಮಗ್ರ ಪ್ರಭ ಸುದ್ದಿ
0 Min Read

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ಕುರಿತಾಗಿ ಕಾನೂನು ಇಲಾಖೆಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಸ್ಪಷ್ಟಪಡಿಸಿದರು.

ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು,” ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಬಗ್ಗೆ ಈಗಾಗಲೇ ನಾನು ಏನು ಹೇಳಿದ್ದೆನೋ ಅದನ್ನೇ ಪುನರುಚ್ಚರಿಸುತ್ತೇನೆ, ಕಾನೂನು ಇಲಾಖೆಗೆ ಈ ವಿಚಾರವಾಗಿ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ” ಎಂದು ತಿಳಿಸಿದರು.

Share this Article