2 ಬಸ್‌ಗಳು ಮುಖಾಮುಖಿ, ನಾಲ್ವರು ಸಾವು, 70 ಮಂದಿಗೆ ಗಾಯ:ಸಿಎಂ ಪರಿಹಾರ ಘೋಷಣೆ

ಸಮಗ್ರ ಪ್ರಭ ಸುದ್ದಿ
1 Min Read

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 70 ಜನರು ಗಾಯಗೊಂಡಿದ್ದಾರೆ.

ಕಡಲೂರು ಜಿಲ್ಲೆಯ ನೆಲ್ಲಿಕುಪ್ಪಂ ಬಳಿಯ ಪಟ್ಟಂಬಾಕ್ಕಂನಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಡಲೂರು ಮತ್ತು ಪನ್ರುತಿ ನಡುವೆ ಎರಡು ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದವು. ಒಂದು ಬಸ್‌ನ ಮುಂಭಾಗದ ಟೈರ್ ಒಡೆದ ಪರಿಣಾಮ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬಸ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ.

ಆಂಬ್ಯುಲೆನ್ಸ್ ಬರುವ ಮುನ್ನವೇ ಪ್ರಯಾಣಿಕರು ಗಾಯಾಳುಗಳನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಮತ್ತು ಚಿಕಿತ್ಸೆ ಪಡೆಯುತ್ತಿರುವವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Share this Article