ಗದಗ: ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡದೆ ರಾಜಕೀಯ ಮಾಡುತ್ತಿದೆ ಎಂದು ಆರೋಪಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಾಂಧೀ ವೃತ್ತದಲ್ಲಿ ಪ್ರತಿಭಟನೆ ಮಾಡಿದರು.
ಶಾಸಕ ಜಿ.ಎಸ್. ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ಬಂದ್ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.

ಪ್ರತಿವರ್ಷ ಲಕ್ಷಾಂತರ ಟನ್ ಅಕ್ಕಿ ಕೇಂದ್ರ ದಾಸ್ತಾನು ನಿಗಮಗಳಲ್ಲಿ ಕೊಳೆತು ಹೊಗುತ್ತವೆ. ರಾಜ್ಯ ಸರ್ಕಾರ ಹಣ ಕೊಟ್ಟು ಖರೀದಿ ಮಾಡುತ್ತೇವೆ ಎಂದು ಹೇಳಿದರು ಕೇಂದ್ರದ ಅಧೀನ ಸಂಸ್ಥೆ ಅಕ್ಕಿ ನೀಡದೆ ಜನ ವಿರೋಧಿ ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ ಎಂದು ವಾಗ್ದಾಳಿ ಮಾಡಿದರು.
ಕಾಂಗ್ರೆಸ್ ಗ್ಯಾರಂಟಿ ಯಶಸ್ವಿಯಾದರೆ ಬಿಜೆಪಿ ನೆಲಕಚ್ಚುತ್ತೆ ಎಂಬ ಆತಂಕದ ಭಾವನೆಯಿಂದ ಅಕ್ಕಿ ನೀಡದೆ ರಾಜಕೀಯ ಮಾಡುತ್ತಿದೆ ಎಂದು ಶಾಸಕಜಿ.ಎಸ್ ಪಾಟೀಲ ಆರೋಪಿಸಿದರು.
ಈ ವೇಳೆ ಕಾಂಗ್ರೆಸ್ ಜಿಲ್ಲಾ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

