ತಿಮ್ಮಾಪೂರ ಗ್ರಾಮದಲ್ಲಿ  ಗೃಹ ಲಕ್ಷ್ಮೀ ಯೋಜನೆ ನೋಂದಣಿ ಕಾರ್ಯಕ್ಕೆ ಚಾಲನೆ

ಸಮಗ್ರ ಪ್ರಭ ಸುದ್ದಿ
2 Min Read

ಗದಗ: ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಪ್ರಮುಖ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಾಸಿಕ 2000 ರೂಪಾಯಿ ಒದಗಿಸುವ ಗೃಹಲಕ್ಷ್ಮಿ ಯೋಜನೆಯ ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು , ಅರ್ಹ ಫಲಾನುಭವಿಗಳು ಈ ಯೋಜನೆ ಲಾಭ ಪಡೆಯಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್ ಬಾಬರಿ ಹೇಳಿದರು.

ಅವರು ತಾಲ್ಲೂಕಿನ ತಿಮ್ಮಾಪೂರ ಗ್ರಾಮದ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಹಾಗೂ ಬಾಪೂಜಿ ಸೇವಾ ಕೇಂದ್ರ ಮತ್ತು ಪ್ರಜಾಪ್ರತಿನಿಧಿಗಳ ಸ್ವಯಂ ಸೇವಕರ ಮೂಲಕ ರಾಜ್ಯ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳ ಪೈಕಿ ಒಂದಾದ ‘ಗೃಹ ಲಕ್ಷ್ಮೀ ಯೋಜನೆ ನೋಂದಣಿ ಕಾರ್ಯಕ್ಕೆ ಅರ್ಜಿ ಸಲ್ಲಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ
ಮಹಿಳೆಯರು ಆತಂಕಪಡಬೇಕಿಲ್ಲ ಎಂದು ಸಾರ್ವಜನಿಕರಿಗೆ ಸಲಹೆಗಳನ್ನು ನೀಡಿದ್ದರು.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ಒದಗಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆದೇಶ ಹೊರಡಿಸಿದೆ.
ನಿಗದಿತ ದಾಖಲೆಗಳೊಂದಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೇ ಗದಗ ಜಿಲ್ಲೆಗಳಲ್ಲಿ ಜನರಿಂದ ಉತ್ತಮ ಸ್ಪಂದನೆ ಬಂದಿದ್ದು ಎಲ್ಲಾ ಮಹಿಳೆಯರು ಅರ್ಜಿ ಸಲ್ಲಿಕೆಯಲ್ಲಿ ತೋಡಿಕೊಂಡಿದ್ದಾರೆ ಎಂದು ಹೇಳಿದರು.

‘ಗೃಹ ಲಕ್ಷ್ಮೀ ಸೌಲಭ್ಯ ಸಿಗುತ್ತೋ ಇಲ್ಲವೋ ಎಂದು ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಳ್ಳಲಿದೆ. ಯೋಜನೆಯನ್ನು ಜಾರಿಗೆ ತಂದೇ ತರುತ್ತೇವೆ. ಅರ್ಜಿ ಸಲ್ಲಿಸಲು ನೂಕು ನುಗ್ಗಲಿನಲ್ಲಿ ತೆರಳುವ ಅವಶ್ಯಕತೆಯಿಲ್ಲ. ಮುಂದಿನ ಅಗಸ್ಟ್ ತಿಂಗಳಿನಿಂದ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾವಣೆ ಯಾಗುತ್ತದೆ. ಆದರೆ ನೀವು ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು.
ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು ಇಲಾಖೆ ಅಧಿಕಾರಿಗಳಿಗೆ ಎಲ್ಲಾ ಮಾಹಿತಿ ನೀಡಿದ್ದಾರೆ. ತಪ್ಪದೇ ಅರ್ಜಿ ಸಲ್ಲಿಸಿ, ಆತಂಕ ಪಡಬೇಡಿ’ ಎಂದು ಹೇಳಿದರು.

ಈ ಸಮಯದಲ್ಲಿ ಅರ್ಜಿ ಸಲ್ಲಿಸಿದ ಸ್ವೀಕೃತ ಪ್ರತಿಗಳನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಮಹಿಳೆಯರಿಗೆ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಹುಚ್ಚೀರಪ್ಪ ಜೋಗಿನ, ಶರಣಪ್ಪ ಜೋಗಿನ, ಗಿರೀಶ ಗುಡ್ಲಾನೂರ, ಸಂಗಪ್ಪ ಮಳ್ಳಿ,ಮಲ್ಲಿಕಾರ್ಜುನ ಇದ್ಲಿ , ತಿರುಕಪ್ಪ ಕುಂಬಾರ,ರಾಮಪ್ಪ ಹಚ್ಚಪ್ಪನವರ, ರಾಮಣ್ಣ ಖಂಡ್ರಿ, ರಾಮಣ್ಣ ಕಂಕರಿ,ಹನುಮವ್ವ ತಳವಾರ, ಗೀತಾ ಕಮ್ಮಾರ,ರತ್ನವ್ವ ಆಲೂರು,ಮತ್ತು ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರದ ಸಿಬ್ಬಂದಿ ಮಲ್ಲಪ್ಪ ಕೋಮಲಾಪೂರ, ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

Share this Article