ಗದಗ: ಜಿಲ್ಲೆಯಲ್ಲಿ ಅನ್ನ ಭಾಗ್ಯ ಪಡಿತರ ಅಕ್ಕಿ ಅಕ್ರಮವಾಗಿ ರಾಜಾರೋಷವಾಗಿ ನಡೆಯುತ್ತಿದ್ದು ಕಳೆದ ಕೆಲ ದಿನಗಳ ಹಿಂದೆಯಷ್ಟೆ ಬೆಟಗೇರಿ ಭಾಗದಲ್ಲಿ ಲಕ್ಷಾಂತರ ಮೌಲ್ಯದ ಅಕ್ರಮ ಸಿಕ್ಕಿದ್ದು ಆ ಪ್ರಕರಣ ಮರೆ ಮಾಚುವ ಮುನ್ನವೇ ಇಂದು ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ ಗ್ರಾಮದ ಬಳಿ ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ವಾಹನದ ಜೊತೆಗೆ 83 ಸಾವಿರ ಮೌಲ್ಯದ 24.5 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆದಿದ್ದಾರೆ.
ಮುಂಡರಗಿ ಯಿಂದ ಹೊಳೆ ಇಟಗಿ ಮಾರ್ಗವಾಗಿ ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದು ಖಚಿತ ಮಾಹಿತಿ ಮೇರೆಗೆ ಶಿರಹಟ್ಟಿ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ನಾಗರಾಜ, ಮಹಮ್ಮದ್ ಹಾಗೂ ಲಕ್ಷ್ಮಣ್ ಎಂಬುವವರನ್ನು ಬಂಧಿಸಿದ್ದಾರೆ.
ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ ಈ ಕುರಿತು ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.