ಗೃಹ ಜ್ಯೋತಿ: ನೋಂದಣಿಗೆ ಇಂದೇ ಕೊನೆಯ ದಿನ!

ಸಮಗ್ರ ಪ್ರಭ ಸುದ್ದಿ
1 Min Read

 

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರೆಂಟಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಗೆ ಇಂದೇ ಕಡೆಯ ದಿನವಾಗಿದ್ದು, 200 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯ ಪಡೆಯಬೇಕಾದರೆ ಇಂದೇ ಅರ್ಜಿ ಸಲ್ಲಿಸಿ ಆಗಸ್ಟ್ ತಿಂಗಳ ಬಿಲ್’ನಲ್ಲಿ ಪ್ರಯೋಜನ ಪಡೆದುಕೊಳ್ಳಿ.

ಜುಲೈ 28 ರಿಂದ ನೋಂದಾಯಿಸಿಕೊಂಡವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್’ನಲ್ಲಿ ಪ್ರಯೋಜನ ಸಿಗುವುದಿಲ್ಲ. ಆದರೆ ಯೋಜನೆಯ ಪ್ರಯೋಜನವನ್ನು ಅವರು ಸೆಪ್ಟೆಂಬರ್ ತಿಂಗಳಿಂದ ಪಡೆಯಲಿದ್ದಾರೆ.

ಹೀಗಾಗಲೇ ಯೋಜನೆಗೆ ಅರ್ಜಿ ಸಲ್ಲಿಸಿದವರ ಪೈಕಿ 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸಿರುವವರು ಆಗಸ್ಟ್ ತಿಂಗಳಲ್ಲಿ ವಿದ್ಯುತ್ ಬಿಲ್ ಕಟ್ಟುವ ಹಾಗಿಲ್ಲ.

ಯೋಜನೆಗೆ ಇನ್ನೂ ಅರ್ಜಿ ಸಲ್ಲಿಸದವರಿಗಾಗಿ ಆಗಸ್ಟ್ ತಿಂಗಳಿಂದ 2 ತಿಂಗಳವರೆಗೆ ವಿದ್ಯುತ್ ಅದಾಲತ್ ಆಯೋಜಿಸುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತದೆ. ಹಾಗೂ ಅರ್ಜಿ ಸಲ್ಲಿಕೆಗೆ ಆಗಿರುವ ತೊಂದರೆಗಳನ್ನು ಗಮನಿಸಿ, ಅರ್ಹರ ಅರ್ಜಿಗಳನ್ನು ಸ್ವೀಕರಿಸಿ ಅವರನ್ನು ಯೋಜನೆಯ ಪ್ರಯೋಜನವನ್ನು ಒದಗಿಸಲಾಗುತ್ತದೆ.

 

Share this Article