ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 3ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಸಿದ್ದರಾಮಯ್ಯ ಅವರು ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಕೆಲವು ಆಪ್ತ ಸಚಿವರು ಬುಧವಾರ ದೆಹಲಿಗೆ ತೆರಳಿ ಅಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಲಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಹೈಕಮಾಂಡ್ ನಾಯಕರು ದಿಲ್ಲಿಯಲ್ಲಿ ರಾಜ್ಯದ ಹಿರಿಯ ನಾಯಕರು, ಸಚಿವರು ಹಾಗೂ ಸಂಸದರ ಸಭೆ ನಡೆಸುತ್ತಿದೆ.
ಆಗಸ್ಟ್ ಮೂರ ರಂದು ಪ್ರಧಾನಿ ಮೋದಿ ಭೇಟಿಯ ಬಳಿಕ ಅದೇ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ ಸಿಂಗ್ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಲಿದ್ದಾರೆ.