ಜಿಲ್ಲಾಸ್ಪತ್ರೆಗಳಲ್ಲೇ ಉಚಿತವಾಗಿ ಎಂಆರ್‌ಐ, ಸಿಟಿ ಸ್ಕ್ಯಾ‌ನ್‌; 47 ಕೋಟಿ ಯೋಜನೆಗೆ ಸರ್ಕಾರ ಅಸ್ತು

graochandan1@gmail.com
1 Min Read

ಬೆಂಗಳೂರು: ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಿ ಗುಣಮಟ್ಟದ ಸೇವೆ ನೀಡುವ ಉದ್ದೇಶದಿಂದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾ‌ನ್‌ ಸೇವೆಗಳನ್ನು ಹೆಚ್ಚುವರಿಯಾಗಿ ಆರಂಭಿಸುವ 47.41 ಕೋಟಿ ರೂ. ಮೊತ್ತದ ಪ್ರಸ್ತಾವನೆಯನ್ನು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದಿಸಿದೆ.

”ಮೈಸೂರು, ಚಿತ್ರದುರ್ಗ ಜಿಲ್ಲಾಸ್ಪತ್ರೆಗಳು, ಮಂಗಳೂರಿನ ವೆನ್‌ಲ್ಯಾಕ್‌ ಹಾಗೂ ಬೆಂಗಳೂರಿನ ಸಿ.ವಿ. ರಾಮನ್‌, ಕೆ.ಸಿ. ಜನರಲ್‌ ಈ ಐದು ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾ‌ನ್‌ ಸೌಲಭ್ಯ ಆರಂಭಿಸಲಾಗುತ್ತಿದೆ,” ಎಂದು ಸಭೆ ಬಳಿಕ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಅವರು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

15 ಆಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾನ್‌
”ಚಿಕ್ಕಮಗಳೂರು, ದಾವಣಗೆರೆ, ಬಾಗಲಕೋಟೆ, ಧಾರವಾಡ, ಹಾವೇರಿ, ರಾಮನಗರ, ಯಾದಗಿರಿ, ಮೈಸೂರು, ಚಿಕ್ಕೋಡಿ ಮತ್ತು ಅರಸೀಕರೆ ಸಾರ್ವಜನಿಕ ಆಸ್ಪತ್ರೆಗಳು, ಮಂಗಳೂರಿನ ವೆನ್‌ಲ್ಯಾಕ್‌, ಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆ, ಸಿ.ವಿ. ರಾಮನ್‌ ಹಾಗೂ ಕೆ.ಸಿ. ಜನರಲ್‌ ಸೇರಿದಂತೆ 15 ಸಾರ್ವಜನಿಕ ಆಸ್ಪತ್ರೆಗಳಲ್ಲಿಎಂಆರ್‌ಐ ಸ್ಕ್ಯಾ‌ನ್‌ ಸೇವೆ ಆರಂಭಿಸಲಾಗುವುದು,” ಎಂದು ಮಾಹಿತಿ ನೀಡಿದರು.

Share this Article