ನೆಚ್ಚಿನ ಶಿಕ್ಷಕನ ವರ್ಗಾವಣೆ ಕಣ್ಣೀರಿಟ್ಟ ವಿದ್ಯಾರ್ಥಿನಿಯರು

ಸಮಗ್ರ ಪ್ರಭ ಸುದ್ದಿ
0 Min Read

ಗದಗ: ನೆಚ್ಚಿನ ಶಿಕ್ಷಕ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿನಿಯರು ಕಣ್ಣೀರಿಟ್ಟ ಘಟನೆ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಗ್ರಾಮದ ಶ್ರೀ ಗುರು ದಿಂಗಾಲೇಶ್ವರ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.

ಸತತ ಹದಿಮೂರ ವರ್ಷಗಳಿಂದ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಮಹಾವೀರ ಸವದಿ ವರ್ಗಾವಣೆಯಾಗಿದ್ದು ಇದರ ಹಿನ್ನೆಲೆಯಲ್ಲಿ ಇಂದು ವಿದ್ಯಾರ್ಥಿಗಳು ದುಃಖದಿಂದಲೇ ಶಿಕ್ಷಕನನ್ನ ಬೀಳ್ಕೊಟ್ಟರು ವಿದ್ಯಾರ್ಥಿನಿಯರು ಶಿಕ್ಷಕನ ಕಾಲಿಗೆ ನಮಸ್ಕಾರ ಮಾಡುತ್ತ ಬಿಕ್ಕಿ ಬಿಕ್ಕಿ ಅತ್ತು ಬೀಳ್ಕೊಟ್ಟರು.

Share this Article