ಬೆಂಗಳೂರು : ರಾಜ್ಯದಲ್ಲಿ ಮಳೆ ಕೈಕೊಟ್ಟಿದ್ದು, ದಿನೇ ದಿನೇ ಉಷ್ಣಾಂಶ ಹೆಚ್ಚಾಗಿದೆ. ಮಳೆ ಬಾರದಕ್ಕೆ ಬೆಂಗಳೂರು ಸೇರಿ ಹಲವು ಜಿಲ್ಲೆಗಳು ಧಗಧಗಿಸಿದೆ. ರಾಜ್ಯದಲ್ಲಿ 3 ರಿಂದ 4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚಳವಾಗಿದೆ. ನಿನ್ನೆ ಒಂದೇ ದಿನ ಬೆಂಗಳೂರಲ್ಲಿ 32.6 ಡಿಗ್ರಿ ಗರಿಷ್ಠ ಉಷ್ಣಾಂಶ ಕಂಡುಬಂದದೆ. ಬೆಂಗಳೂರಿನಲ್ಲಿ ಮತ್ತಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಗಳಿವೆ. ಮೇಲ್ಮೈ ಸುಳಿಗಾಳಿ ಬೀಸುವ ಪ್ರಮಾಣ ಕಡಿಮೆ ಹಿನ್ನೆಲೆ ಸೆಪ್ಟೆಂಬರ್ ಮೊದಲ ವಾರ ರಾಜ್ಯದಲ್ಲಿ ಮತ್ತೆ ಮಳೆ ನಿರೀಕ್ಷೆಯಿದೆ. ಕರಾವಳಿ ಭಾಗದಲ್ಲಿ ವಾಡಿಕೆಯ ಮಳೆಯಾಗುವ ಸಾಧ್ಯತೆಯಿದೆ.