ಹಂಸಲೇಖ ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಸಮಗ್ರ ಪ್ರಭ ಸುದ್ದಿ
1 Min Read

ಮೈಸೂರು: ವಿಶ್ವಪ್ರಸಿದ್ಧ ಮೈಸೂರು ದಸರಾವನ್ನು  ಈ ವರ್ಷ ‘ನಾದಬ್ರಹ್ಮ’ ಎಂದು ಕರೆಯಲ್ಪಡುವ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಈ ಬಾರಿ ಕೂಡ ಮೈಸೂರು ದಸರಾವನ್ನು ಸಾಂಪ್ರದಾಯಿಕಬದ್ಧವಾಗಿ ಆಚರಿಸಲಾಗುವುದು ಎಂದು ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿಯೇ ಇಂದು ಘೋಷಿಸಿದರು.

ಅಕ್ಟೋಬರ್ 15ಕ್ಕೆ ದಸರಾ ಉದ್ಘಾಟನೆ: ದಸರಾ ಅಕ್ಟೋಬರ್​ 15 ರ ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ ಎಂದು ಹೇಳಿದರು.

ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್​ಹೌಸ್ ವೃತ್ತ, ಎಲ್​ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ, ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ ಎಂದರು.

Share this Article