ಗದಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಗೃಹ ಉಪಯೋಗಿ ವಸ್ತುಗಳು ಸುಟ್ಟು ಹೋದ ಘಟನೆ ಪಾಪನಾಶಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಾಂತವೀರಯ್ಯ ಕುಲಕರ್ಣಿ ಎಂಬುವವರಿಗೆ ಸೇರಿದ ಮನೆಗೆ ಇಂದು ಮಧ್ಯಾಹ್ನ ಬೆಂಕಿ ಹತ್ತಿದ್ದು ಈ ವೇಳೆ ಕುಟುಂಬದ ಸದಸ್ಯರೆಲ್ಲರೂ ಜಮೀನು ಕೆಲಸಕ್ಕೆ ತೆರಳಿದ್ದರು.ವಿ ದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಮನೆಯಲ್ಲಿದ್ದ ವಸ್ತಗಳು ಸುಟ್ಟು ಭಸ್ಮವಾಗಿವೆ.
ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸಿದ್ದಾರೆ ಗದಗ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.